ಬೆಂಗಳೂರು: ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ಹುದ್ದೆಯ ಭರ್ತಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ .
6 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಆಂಗ್ಲ ಭಾಷೆಯ 4,531, ಗಣಿತ ಮತ್ತು ವಿಜ್ಞಾನದ 4,233 ಹಾಗೂ ಸಮಾಜ ಪಾಠದ 1,236 ಹುದ್ದೆ ಸೇರಿ 10 ಸಾವಿರ ಪದವೀಧರ ಶಿಕ್ಷಕ ಹುದ್ದೆಗಳಿಗೆ ಪದವಿ ಜತೆಗೆ ಬಿ.ಇಡಿ ಪೂರೈಸಿದ ಅಭ್ಯರ್ಥಿಗಳಿಂದ 2017ರ ಸೆಪ್ಟೆಂಬರ್ ಅಂತ್ಯದಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಕೇಂದ್ರೀಕೃತ ದಾಖಲಾತಿ ಘಟಕದ (ಸಿಎಸಿ) ಮೂಲಕ ಜಿಲ್ಲಾಮಟ್ಟದಲ್ಲೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಉತ್ತರ ಪತ್ರಿಕೆಯ ಮೌಲ್ಯ ಮಾಪನವನ್ನು ಜಿಲ್ಲಾ ಉಪ ನಿರ್ದೇಶಕರು ನಡೆಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಯಿಂದಾಗಿ ಫಲಿತಾಂಶ ಪ್ರಕಟವಾಗಿರಲಿಲ್ಲ.
ಈಗಾಗಲೇ ಪರೀಕ್ಷೆಯ ಕೀ ಉತ್ತರ ಗಳನ್ನು ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನ ಸರ್ವ ಶಿಕ್ಷಾ ಅಭಿಯಾನದ ಕಚೇರಿಯಲ್ಲಿ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವರು ಫಲಿತಾಂಶ ಘೋಷಣೆ ಮಾಡಲಿದ್ದಾರೆ. ಎಲ್ಲಾ ಹುದ್ದೆಗಳು ನೇರ ನೇಮಕಾತಿ ವಿಧಾನದಲ್ಲೇ ಭರ್ತಿಯಾಗಲಿವೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10,000 graduate teacher’s future decide today. State Government Primary and High School teacher’s examination. The results of competitive examination will be announced today