Application has invited for the Teacher Eligibility Test 2018
ಕರ್ನಾಟಕ ಸರ್ಕಾರದ ‘ಸಾರ್ವಜನಿಕ ಶಿಕ್ಷಣ ಇಲಾಖೆ’ಯು ಶಿಕ್ಷಕರ ಅರ್ಹತಾ ಪರೀಕ್ಷೆ(TET) ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪ್ರಕಟಣೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 05-12-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-12-2018
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 24-12-2018
– ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು(TET) 03-02-2019(ಭಾನುವಾರ) ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
– TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ 23-01-2019 ರಿಂದ ಪ್ರವೇಶ ಪತ್ರ ಇಲಾಖಾ ವೆಬ್ಸೈಟ್ನಲ್ಲಿ ಲಭ್ಯವಿರುತ್ತದೆ.
ಅರ್ಜಿ ಶುಲ್ಕ ಎಷ್ಟು?
-ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ ಆಗಿದ್ದಲ್ಲಿ ರೂ 700. ಎರಡೂ ಪತ್ರಿಕೆಗಳಾಗಿದ್ದಲ್ಲಿ ರೂ.1000.
-ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ ಆಗಿದ್ದಲ್ಲಿ ರೂ 700. ಎರಡೂ ಪತ್ರಿಕೆಗಳಾಗಿದ್ದಲ್ಲಿ ರೂ.1000.
-ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ ಆಗಿದ್ದಲ್ಲಿ ರೂ 350. ಎರಡೂ ಪತ್ರಿಕೆಗಳಾಗಿದ್ದಲ್ಲಿ ರೂ.500.
– ವಿಶೇಷ ಅಗತ್ಯವುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ವಿನಾಯಿತಿ ಇರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ www.schooleducation.kar.nic.in ಗೆ ಭೇಟಿ ನೀಡಿ ದಿನಾಂಕ 05-12-2018 ರಿಂದ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ಸೂಚನೆಗಳು
– ಆನ್ಲೈನ್ ಅರ್ಜಿಯನ್ನು ಕೇಳಿದ ಎಲ್ಲಾ ಮಾಹಿತಿಯನ್ನು ನೀಡಿ ಸಲ್ಲಿಸಬೇಕು.
– ಭಾವಚಿತ್ರ ಮತ್ತು ಸಹಿಯನ್ನು ಜಿಪಿಇಜಿ ಫಾರ್ಮ್ಯಾಟ್ ನಲ್ಲಿ ಅಪ್ಲೋಡ್ ಮಾಡಬೇಕು.
– ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಪೂರ್ಣವಿವರಗಳನನ್ನೊಳಗೊಂಡ ಅರ್ಜಿ ಸಲ್ಲಿಸಿದ ಮತ್ತು ಸಂಪೂರ್ಣ ವಿಳಾಸವುಳ್ಳ ಕಂಪ್ಯೂಟರ್ ಜನರೇಟೆಡ್ ಪ್ರತಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆ – 2018 ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಪ್ರಕಟಣೆ ನೋಡಲು ಕ್ಲಿಕ್ ಮಾಡಿ
Tecacher Eligibility Test 2018
KARTET – 2018 ಇಂಗ್ಲೀಷ್ ಪ್ರಕಟಣೆಗಾಗಿ ಕ್ಲಿಕ್ ಮಾಡಿ
Application has invited for the Teacher Eligibility Test 2018. Eligible candidates can apply for the KARTET 2018. Read more here..