Home » ಹೈದರಾಬಾದ್ ಕರ್ನಾಟಕದ 131 FDA, SDA ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೈದರಾಬಾದ್ ಕರ್ನಾಟಕದ 131 FDA, SDA ಹುದ್ದೆಗಳಿಗೆ ಅರ್ಜಿ ಆಹ್ವಾನ

by manager manager

ಕರ್ನಾಟಕ ಲೋಕಸೇವಾ ಆಯೋಗವು ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ, ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಈ ಕೆಳಕಂಡ ಹೈದರಾಬಾದ್‌-ಕರ್ನಾಟಕ ಪ್ರದೇಶದ ಸ್ಥಳೀಯ ವೃಂಧದ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ.(kpsc fda sda recruitment 2019 hyderabad karnataka notification)

ಹುದ್ದೆಯ ಹೆಸರು : ಪ್ರಥಮ ದರ್ಜೆ ಸಹಾಯಕ

ಒಟ್ಟು ಹುದ್ದೆಗಳ ಸಂಖ್ಯೆ : 50

ವಿದ್ಯಾರ್ಹತೆ: ಯಾವುದೇ ಪದವಿ

ಹುದ್ದೆಯ ಹೆಸರು : ದ್ವಿತೀಯ ದರ್ಜೆ ಸಹಾಯಕ

ಒಟ್ಟು ಹುದ್ದೆಗಳ ಸಂಖ್ಯೆ : 81

ವಿದ್ಯಾರ್ಹತೆ: ಪಿಯುಸಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣ

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 11-02-2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-03-2019

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 13-03-2019

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 600

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.300

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಶುಲ್ಕ ವಿನಾಯಿತಿ ನೀಡಲಾಗಿದೆ

ಅರ್ಜಿ ಶುಲ್ಕ ಪಾವತಿಸುವ ವಿಧಾನ

ಅರ್ಜಿ ಸಲ್ಲಿಸಿದ ನಂತರ ಪರೀಕ್ಷಾ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ Common Service Center(CSC) ನಲ್ಲಿ ಪಾವತಿ ಮಾಡಬಹುದಾಗಿರುತ್ತದೆ.

ವಯೋಮಿತಿ

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/: 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಮಾಜಿ ಸೈನಿಕ ಅಭ್ಯರ್ಥಿಗಳು : ಗರಿಷ್ಠ ವಯೋಮಿತಿಯಲ್ಲಿಅವರುಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ವರ್ಷಗಳು ಜೊತೆಗೆ 03 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.

ಈ FDA ಮತ್ತು SDA ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು 07, 13, ಮತ್ತು 28ನೇ ಏಪ್ರಿಲ್ ತಿಂಗಳಲ್ಲಿ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ವಿಧಾನ ಹೇಗೆ?

ಈ ಎರಡು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮೀಸಲಾತಿ ಅನ್ವಯ ನೇಮಕಾತಿ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಭರ್ತಿ ಮಾಡಿಬೇಕು. ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ

– ಭಾವಚಿತ್ರ ಮತ್ತು ಸಹಿ

– ವಯೋಮಿತಿಗೆ ಆಧಾರವಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

– ವಿದ್ಯಾರ್ಹತೆ ದಾಖಲೆ

– ಮೀಸಲಾತಿಗೆ ಕೋರಿದ್ದರೆ ಸಂಬಂಧಿಸಿದ ದಾಖಲೆಗಳು ಮತ್ತು ಇತರೆ.

ಕರ್ನಾಟಕ ಲೋಕಸೇವಾ ಆಯೋಗದ FDA ಮತ್ತು SDA ನೇಮಕಾತಿ 2019 ರ ಅಧಿಸೂಚನೆಯ ಪಿಡಿಎಫ್‌ ಫೈಲ್‌ಗಾಗಿ – ಕ್ಲಿಕ್‌ ಮಾಡಿ

FDA ಮತ್ತು SDA ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್‌ಗಾಗಿ – ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕಡ್ಡಾಯ ಪ್ರಕ್ರಿಯೆಗಳು

– ಮೊದಲನೇ ಹಂತ -Profile Creation/Updation

– ಎರಡನೇ ಹಂತ : Application Submission

– ಮೂರನೇ ಹಂತ : Fees Payment through My Application Section

ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ

ಯಾವ್ಯಾವ ನ್ಯಾಯಾಲಯಗಳಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ ಎಂಬ ಕಂಪ್ಲೀಟ್ ಲಿಸ್ಟ್ ಈ ಕೆಳಕಂಡಂತಿದೆ.

Karnataka Public Service Commission(KPSC) has invites application from Hyderabad-Karnataka candidates for the post of First Division Assistants(FDA) and Second Division Assistant(SDA).

You may also like