Home » BWSSB ನಲ್ಲಿ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ: ಮಾರ್ಚ್ 7 ರಿಂದ ಅರ್ಜಿ

BWSSB ನಲ್ಲಿ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ: ಮಾರ್ಚ್ 7 ರಿಂದ ಅರ್ಜಿ

by manager manager

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿರುವ ವಿವಿಧ ಶ್ರೇಣಿಯ 26 ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳು ‘ಬಿ’ ಮತ್ತು ‘ಸಿ’ ದರ್ಜೆಯ ವಿವಿಧ ಮಿಕ್ಕುಳಿದ ವೃಂದದ ಬ್ಯಾಕ್‌ಲಾಗ್ ಹುದ್ದೆಗಳಾಗಿದ್ದು ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಈ ಕೆಳಗಿನಂತಿದೆ.

ಪ್ರಮುಖ ದಿನಾಂಕಗಳು

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 07-03-2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-04-2019

ಅರ್ಜಿ ಶುಲ್ಕ ಎಷ್ಟು?

ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳುಉ – 1977 ನಿಯಮ 13 ರಲ್ಲಿರುವಂತೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡ ವಿದ್ಯಾರ್ಹತೆಯನ್ನು ಹೊಂದಿರಲೇಬೇಕು.

ವಯೋಮಿತಿ

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/: 40 ವರ್ಷ ಗರಿಷ್ಟ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ

– ಭಾವಚಿತ್ರ ಮತ್ತು ಸಹಿ

– ವಯೋಮಿತಿಗೆ ಆಧಾರವಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

– ವಿದ್ಯಾರ್ಹತೆ ದಾಖಲೆ

– ಮೀಸಲಾತಿಗೆ ಕೋರಿದ್ದರೆ ಸಂಬಂಧಿಸಿದ ದಾಖಲೆಗಳು ಮತ್ತು ಇತರೆ.

ವಿಶೇಷ ಸೂಚನೆ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ತಾಂತ್ರಿಕ ತೊಂದರೆ ಉಂಟಾದಲ್ಲಿ ಅಭ್ಯರ್ಥಿಗಳು ಸಹಾಯವಾಣಿ 080-22238888 ಸಂಪರ್ಕಿಸಬಹುದು.

BWSSB ಅಧಿಕೃತ ವೆಬ್‌ಸೈಟ್ ವಿಳಾಸ – https://bwssb.gov.in/

BWSSB ಬ್ಯಾಕ್‌ಲಾಗು ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಫೈಲ್ ಗಾಗಿ – ಕ್ಲಿಕ್ ಮಾಡಿರಿ

You may also like