ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 6 ಜಿಲ್ಲೆಗಳಿಗೆ ಒಟ್ಟಾರೆ 667 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಕಂಪ್ಲೀಟ್ ಮಾಹಿತಿ ಈ ಕೆಳಗಿನಂತಿದೆ. (wcd recruitment 2019)
ಕಲಬುರ್ಗಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬಾಗಲಕೋಟೆ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮೇಲೆ ತಿಳಿಸಿದ ಹುದ್ದೆಗಳನ್ನು ಭರ್ತಿ ಮಾಡಲು ಈ ಅಧಿಸೂಚನೆ ಹೊರಡಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಯಾವಾಗಿನಿಂದ ಅರ್ಜಿ ಸಲ್ಲಿಸಬಹುದು, ಕೊನೆಯ ದಿನಾಂಕ ಯಾವುದು ಮತ್ತು ಇತರೆ ಮಾಹಿತಿ ಈ ಕೆಳಗಿನಂತಿದೆ.
ಕಲಬುರ್ಗಿ
ಅರ್ಜಿ ಸಲ್ಲಿಸಲು ಆರಂಭಿಕ ದಿನ : 09/03/2019
ಅರ್ಜಿ ಸಲ್ಲಿಸಲು ಕೊನೆಯ ದಿನ : 08/04/2019
ಚಿಕ್ಕಬಳ್ಳಾಪುರ
ಅರ್ಜಿ ಸಲ್ಲಿಸಲು ಆರಂಭಿಕ ದಿನ : 08/03/2019
ಅರ್ಜಿ ಸಲ್ಲಿಸಲು ಕೊನೆಯ ದಿನ : 08/04/2019
ಬೆಂಗಳೂರು ನಗರ
ಅರ್ಜಿ ಸಲ್ಲಿಸಲು ಆರಂಭಿಕ ದಿನ : 08/03/2019
ಅರ್ಜಿ ಸಲ್ಲಿಸಲು ಕೊನೆಯ ದಿನ : 07/04/2019
ಬಾಗಲಕೋಟೆ
ಅರ್ಜಿ ಸಲ್ಲಿಸಲು ಆರಂಭಿಕ ದಿನ : 07/03/2019
ಅರ್ಜಿ ಸಲ್ಲಿಸಲು ಕೊನೆಯ ದಿನ : 06/04/2019
ಕೊಡಗು
ಅರ್ಜಿ ಸಲ್ಲಿಸಲು ಆರಂಭಿಕ ದಿನ : 02/03/2019
ಅರ್ಜಿ ಸಲ್ಲಿಸಲು ಕೊನೆಯ ದಿನ : 31/03/2019
ಚಾಮರಾಜನಗರ
ಅರ್ಜಿ ಸಲ್ಲಿಸಲು ಆರಂಭಿಕ ದಿನ : 26/02/2019
ಅರ್ಜಿ ಸಲ್ಲಿಸಲು ಕೊನೆಯ ದಿನ : 27/03/2019
ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ವಯೋಮಿತಿ
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳ ಜಿಲ್ಲಾವಾರು ಅಧಿಸೂಚನೆ ನೋಡಲು – ಕ್ಲಿಕ್ ಮಾಡಿ
ಆಯ್ಕೆ ವಿಧಾನ
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು SSLC ಉತ್ತೀರ್ಣರಾಗಿದ್ದು, ಕನಿಷ್ಠ 3ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
1. ಅರ್ಹ ವಿದ್ಯಾರ್ಹತೆ ಹೊಂದಿದ ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ಅಂಗನವಾಡ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ,ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಪ್ರಥಮ ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.
2. ಇಲಾಖೆಯ ಸುಧಾರಣೆ ಸಂಸ್ಥೆಗಳಲ್ಲಿ ಆಶ್ರಯ ಪಡೆದ ಹಾಲಿ ಮತ್ತು ಮಾಜಿ ನಿವಾಸಿಗಳು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಯ ಪ್ರಕರಣವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಆಯ್ಕೆ ಮಾಡಲಾಗುವುದು.
3. ಅರ್ಹ ವಿದ್ಯಾರ್ಹತೆ ಹೊಂದಿದ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದ ಮಹಿಳೆ ಮತ್ತು ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡಲಾಗುವುದು.
4. ಅರ್ಹ ವಿದ್ಯಾರ್ಹತೆ ಹೊಂದಿದ ಶೇ. 60% ಮೀರದಂತೆ ಅಂಗವಿಕಲತೆ ಹೊಂದಿದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಮೇಲೆ ವಿವರಿಸಿದ ಕ್ರಮ ಸಂಖ್ಯೆ – 1,2 & 3 ರ ಪ್ರಕರಣಗಳನ್ನು ಹೊರತುಪಡಿಸಿದ, ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿ, ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ. ಒಂದುವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು.
5. ಮೇಲೆ ವಿವರಿಸಿದ ಕ್ರಮ ಸಂಖ್ಯೆ- 1,2,3 & 4ರ ಪ್ರಕರಣಗಳನ್ನು ಹೊರತುಪಡಿಸಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಇಲಾಖೆ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಕಾಂಕ್ಷಿಗಳಿಗೆ ಮಾರ್ಗಸೂಚಿಗಳು – ಕ್ಲಿಕ್ ಮಾಡಿ