Home » ಪಂಚಾಯತ್ ರಾಜ್‌ ಇಲಾಖೆಯ ವಿವಿಧ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಚಾಯತ್ ರಾಜ್‌ ಇಲಾಖೆಯ ವಿವಿಧ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

by manager manager

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಲಹೆಗಾರ (ಕನ್ಸಲ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಈ ಉದ್ಯೋಗದ ಬಗ್ಗೆ ಇತರೆ ಮಾಹಿತಿ ಈ ಕೆಳಗಿನಂತಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 24/05/2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/06/2019

ಆಯ್ಕೆ ಪ್ರಕ್ರಿಯೆ : ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ

ಆಯಾ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ. ಜೊತೆಗೆ ಆಯಾ ಹುದ್ದೆಗಳಿಗೆ ಆಯಾ ಕ್ಷೇತ್ರದ ಅನುಭವವನ್ನು ಹೊಂದಿರಬೇಕು. ಈ ಬಗ್ಗೆ ಹೆಚ್ಚಿನ ಇತರೆ ಮಾಹಿತಿ ಅಧಿಸೂಚನೆಯ ಪಿಡಿಎಫ್‌ನಲ್ಲಿ ಲಭ್ಯ.

ವಯೋಮಿತಿ

ಅರ್ಜಿ ಸಲ್ಲಿಸಲು ಗರಿಷ್ಠ 55 ವರ್ಷ ಮತ್ತು ನಿವೃತ್ತಿ ಹೊಂದಿದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ ಶ್ರೇಣಿ : ರೂ.50000 ಪ್ರತಿ ತಿಂಗಳು

ಅರ್ಜಿ ಸಲ್ಲಿಸುವುದು ಹೇಗೆ?

ಅಧಿಸೂಚನೆ ಪಿಡಿಎಫ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಪ್ರಿಂಟ್ ತೆಗೆದುಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.

:- Committe Room, RDPR 3rd floor, gate no 03, MS building, Bengaluru.

– ಈ ವಿಳಾಸಕ್ಕೆ 16-06-2019 ರಂದು ಸಮಯ ಬೆಳಿಗ್ಗೆ 11 ಗಂಟೆ ವೇಳೆಗೆ ವಿಳಾಸ ಮಾಹಿತಿ ಮತ್ತು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು.

ಅರ್ಜಿ ಮತ್ತು ಅಧಿಕೃತ ಅಧಿಸೂಚನೆ ಡೌನ್‌ಲೋಡ್ ಮಾಡಿಕೊಳ್ಳಲು – ಕ್ಲಿಕ್ ಮಾಡಿ