ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾ ಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ, ಅಭ್ಯಾಸ ಮಾಡುತ್ತಿರುವ, ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
14 ರಿಂದ 26 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಅಕಾಡೆಮಿಯ ಕಚೇರಿ ಅಥವಾ ಅಕಾಡೆಮಿಯ ವೆಬ್ಸೈಟ್ https//karnatakasangeetanrityaacademy.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ.
ಅರ್ಜಿಯನ್ನು ಜ.30 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ 2 ನೇ ಮಹಡಿ ಜೆ.ಸಿ ರಸ್ತೆ ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22215072 ಸಂಪರ್ಕಿಸಬಹುದಾಗಿದೆ .