ಹಾವೇರಿ: ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಸಹಾಯ ಒದಗಿಸಲು ‘ವಿದ್ಯಾಸಿರಿ’ ಯೋಜನೆಯಡಿ ಪ್ರತಿ ತಿಂಗಳಿಗೆ ರೂ.1,500/-ರಂತೆ, ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು (ಜೂನ್-2022 ರಿಂದ ಮಾರ್ಚ್-2023 ರವರೆಗೆ) ಅವರ ಬ್ಯಾಂಕ್ ಖಾತೆಗೆ, ಆನ್ಲೈನ್ ಮೂಲಕ ಜಮಾ ಮಾಡಲಾಗುವುದು.
ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳನ್ನು ಸಂಬಂಧಿಸಿದ ಪ್ರಾಂಶುಪಾಲರಿಂದ ಧೃಡೀಕರಿಸಿ ಆನ್ಲೈನ್ ಜಾಲತಾಣ ವಿಳಾಸ https://sevasindu.karnataka.gov.in ರಲ್ಲಿ ದಿನಾಂಕ 20-10-2022 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ವಿದ್ಯಾಸಿರಿ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲಾಗುವುದು.
ಆನ್ಲೈನ್ ಅರ್ಜಿ ಸಲ್ಲಿಸಿದ ನಂತರ ಪ್ರಾಂಶುಪಾಲರಿಂದ ದೃಢೀಕರಿಸಿದ ದಾಖಲಾತಿಗಳು ಹಾಗೂ ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಯ ಹಾರ್ಡ್ಕಾಪಿಯನ್ನು ದಿನಾಂಕ 21-10-2022 ರೊಳಗೆ ಜಿಲ್ಲಾ ಕಚೇರಿಗೆ ಹಾಗೂ ಸಂಬಂಧಿಸಿದ ತಾಲೂಕು ಮಾಹಿತಿ ಕೇಂದ್ರಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾವೇರಿ, ಬ್ಯಾಡಗಿ, ರಾಣೇಬೆನ್ನೂರ, ಹಾನಗಲ್, ಹಿರೇಕೆರೂರ, ಶಿಗ್ಗಾಂವ ಮತ್ತು ಸವಣೂರ ತಾಲೂಕು ಮಾಹಿತಿ ಕೇಂದ್ರಗಳಿಗೆ ಹಾಗೂ ಜಿಲ್ಲಾ ಕಚೇರಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.