ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು(Devaraj URS Backward classes Development Corporation) ‘ಅರಿವು ಶೈಕ್ಷಣಿಕ ಸಾಲ ಯೋಜನೆ’ ಅಡಿಯಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ರೂ.1 ಲಕ್ಷರೂ ವರೆಗೆ ಸಾಲ ಮಂಜೂರು ಮಾಡುವ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ.
ಯಾರಿಗೆ ಈ ಸಾಲ ಲಭ್ಯ?
ಈ ಸಾಲವು ಕೇವಲ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ವಾರ್ಷಿಕ ಶೇ.2 ಬಡ್ಡಿದರದಲ್ಲಿ ಸಾಲ ದೊರೆಯಲಿದೆ.
2018-2019ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಡಿಪ್ಲೋಮೊ ಲ್ಯಾಟರಲ್ ಎಂಟ್ರಿ(ಇಂಜಿಯರಿಂಗ್ ಕೋರ್ಸ್ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಪಿ.ಜಿ ಕೋರ್ಸ್ಗಳಾದ MBA, MCA, MTech, ME, ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆಯಾಗಿ ಸಾಲಾ ಪಡೆಯುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾದ ಮೂಲಕ ಶುಲ್ಕ ಹೊಂದಾಣಿಕೆ ನಡೆಸಲಾಗುತ್ತದೆ.
ಅರ್ಜಿಗಳನ್ನು ಯಾರು ಸಲ್ಲಿಸಬಹುದು?
ಸಿಇಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಬಯಸುವ ಪಿಜಿ ಕೋರ್ಸ್ಗಳಾದ ಎಂ.ಬಿ.ಎ, ಎಂ.ಸಿ.ಎ, ಎಂ,ಟೆಕ್, ಎಂ,ಇ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಮತ್ತು ಪ್ರವರ್ಗ-3ಬಿ ಗೆ ಸೇರಿದ (ವಿಶ್ವಕರ್ಮ ಮತ್ತು ಉಪ ಜಾತಿಗಳು, ಅಲ್ಪ ಸಂಖ್ಯಾತರು ಮತ್ತು ಅದರ ಉಪಜಾತಿಗಳನ್ನು ಹೊರತು ಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳ ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಅಹ್ವಾನಿಸಲಾಗಿದೆ. ಸ್ವೀಕೃತಗೊಂಡ ಅರ್ಜಿಗಳಲ್ಲಿ ಅನುದಾನ ಲಭ್ಯತೆ ಮತ್ತು ಸರ್ಕಾರದ ಆದೇಶದನ್ವಯ ಪ್ರವರ್ಗವಾರು 70:30 ಅನುಪಾತ ಹಾಗೂ ರ್ಯಾಂಕ್ ವಾರು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿಗಳು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವೆಬ್ಸೈಟ್ www.karnataka.gov.in/dbcdc ಗೆ ಲಾಗಿನ್ ಆಗಿ ವೆಬ್ಸೈಟ್ನಲ್ಲಿ UserName: infra\dbcdcarivu ಮತ್ತು Password: DB(d#098 ನಮೂದಿಸಿ ಅರ್ಜಿಯನ್ನು ಆನ್ಲೈನ್ನಲ್ಲಿ ಭರ್ತಿಮಾಡಬೇಕು. ಈ ಕೆಳಗೆ ತಿಳಿಸಲಾಗಿರುವ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ದಿನಾಂಕ 31-07-2018 ರೊಳಗೆ ಸಲ್ಲಿಸುವುದು. ವಿದ್ಯಾರ್ಥಿಯು ಕೇವಲ ಒಂದು ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯೊಂದಿಗೆ ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲೆಗಳು
1. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
2. ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ
3. ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ
4. ಎಸ್ಎಸ್ಎಲ್ಸಿ ಅಂಕಪಟ್ಟಿ
5. ಸಿಇಟಿ ಪ್ರವೇಶ ಪರೀಕ್ಷೆ ಅಡ್ಮಷನ್ ಟಿಕೆಟ್
Devaraj URS Backward classes Development Corporation has announced upto one lakh student loan per yearly under the ‘Arivu education loan scheme’.