ಹಾವೇರಿ:ಸೆ.12 : ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಪ್ರಸಕ್ತ 2022-23ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರು ಗಂಗಾ ಕಲ್ಯಾಣ ನೀರಾವರಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಹುದು.
ಅಭ್ಯರ್ಥಿಯು 18 ರಿಂದ 55 ವರ್ಷದೊಳಗಿರಬೇಕು, ಗ್ರಾಮಾಂತರ ಪ್ರದೇಶದವರ ವಾರ್ಷಿಕ ಆದಾಯ ರೂ.98 ಸಾವಿರ ಹಾಗೂ ಪಟ್ಟಣ ಪ್ರದೇಶದವರ ಆದಾಯ ರೂ.1.20 ಲಕ್ಷದೊಳಗರಿಬೇಕು. ಕನಿಷ್ಟ ಎರಡು ಕೆರೆ ಜಮೀನು ಹೊಂದಿರಬೇಕು. ಈ ಹಿಂದೆ ನಿಗಮದ ಯಾವುದೇ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಹಾಗೂ ಅವರ ಕುಟುಂದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಆಸಕ್ತರು ದಿನಾಂಕ 20-10-2022ರೊಳಗಾಗಿ ಸೇವಾಸಿಂಧು ವೆಬ್ ಪೋರ್ಟಲ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://www.dbcdc.karnataka.gov.in ಅಥವಾ ಸಂಬಂಧಪಟ್ಟ ನಿಗಮದ ವೆಬ್ಸೈಟ್, ನಿಗಮದ ಕಚೇರಿ ದೂ.08375-20038, ಸಹಾಯವಾಣಿ 9606066389 ಅಥವಾ 8824300400 ಸಂಪರ್ಕಿಸಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.