ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(Welfare Department of Backward Classes) ವಿದೇಶಿ ವ್ಯಾಸಂಗ ವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.
2018-19ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ/ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2A, ಪ್ರವರ್ಗ-3B ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/10/2018
ಇನ್ನೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ www.backwardclasses.kar.nic.in ಅನ್ನು ನೋಡಬಹುದು. ಅಥವಾ ಈ ಲಿಂಕ್ ಅನ್ನು ಕ್ಲಿಕ್ ಮಾಡಿ. http://backwardclasses.kar.nic.in/PDF/OnlineApplication/Training/2018-19/FS201819/2018-19Notification.pdf
ಆನ್ಲೈನ್ ಅರ್ಜಿಯೊಂದಿಗೆ ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲೆಗಳು ಈ ಕೆಳಗಿನಂತಿವೆ
– ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
– ಜಾತಿ ಮತ್ತು ಆದಾಯ ದೃಢೀಕರಣ ಪತ್ರ
– 1ನೇ ತರಗತಿಯಿಂದ ಪದವಿಯವರೆಗೆ ಕರ್ನಾಟಕದಲ್ಲಿ ಅಧ್ಯಯನ ಮಾಡಿರುವ ಬಗ್ಗೆ ಸಂಬಂಧಿತ ಸಂಸ್ಥೆಗಳಿಂದ ವ್ಯಾಸಂಗ ಪ್ರಮಾಣ ಪತ್ರ
– ಪಾನ್ ಕಾರ್ಡ್
– ಪಾಸ್ಪೋರ್ಟ್
– ವೀಸಾ (ಲಭ್ಯವಿದ್ದಲ್ಲಿ)
– ಸಬಂಧಪಟ್ಟ ವಿಶ್ವವಿದ್ಯಾಲಯ/ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ವಿಶ್ವವಿದ್ಯಾಲಯದಿಂದ ನೀಡಿರುವ ಆಫರ್ ಲೆಟರ್
– ಕೋರ್ಸ್ ಅವಧಿಗೆ ತಗಲುವ ವೆಚ್ಚದ ವಿವರ
– ಘಟಿಕೋತ್ಸವ ಪ್ರಮಾಣ ಪತ್ರ/ ತಾತ್ಕಾಲಿಕ ಪದವಿ ಪ್ರಮಾಣ ಪತ್ರ
– G-MAT, TOEFL, GRE, IELTS, SAT ಐದರಲ್ಲಿ ಯಾವುದಾದರೂ ಒಂದು ಪ್ರವೇಶ ಪರೀಕ್ಷೆ ತೇರ್ಗಡೆಯಾಗಿರುವ ಬಗ್ಗೆ ಪ್ರಮಾಣ ಪತ್ರ.
ನಿಗದಿಪಡಿಸಿರುವ ಅರ್ಹತೆಗಳು ಮತ್ತು ಇತರೆ ಷರತ್ತುಗಳನ್ನು ತಿಳಿಯಲು ಕ್ಲಿಕ್ ಮಾಡಿ
D. Devaraja Raju Urs, Welfare Department of Backward Classes, has been invited by eligible candidates to obtain foreign study scholarships.