ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ(D Devaraju Arasu Backward Classes Department) 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ನಿರುದ್ಯೋಗಿ ಪದವಿಧರರಿಗೆ ಸ್ವಯಂ ಉದ್ಯೋಗ ಸಾಲ ಸೌಲಭ್ಯವನ್ನು ಪಡೆಯಲು ದಿನಾಂಕ 03/10/2018 ರಂದು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿ ಅರ್ಜಿ ಅಹ್ವಾನಿಸಿಲಾಗಿದೆ.
ವಾರ್ಷಿಕ ಶೇ.6ರ ಬಡ್ಡಿದರದಲ್ಲಿ ಗರಿಷ್ಠ ರೂ.10 ಲಕ್ಷಗಳ ವರೆಗೆ ಸಾಲ ಸೌಲಭ್ಯವನ್ನು ನಿರುದ್ಯೋಗಿ ಪದವಿಧರರು ಪಡೆಯಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
– ಈ ಇಲಾಖೆ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ನಿರುದ್ಯೋಗಿ ಪದವಿಧರರು ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಪಡೆಯಬಹುದು. ಅಥವಾ
– ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
– ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಅವರು ವಾಸಿಸುತ್ತಿರುವ ಆಯಾ ಜಿಲ್ಲೆಯ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಸಲ್ಲಿಸಬಹುದು. ಹಾಗೂ ಈ ಕಛೇರಿಗಳಲ್ಲಿಯೂ ಅರ್ಜಿಯನ್ನು ಪಡೆಯಬಹುದು.
– ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ತಿಳಿಯಬಹುದು.
ಅರ್ಜಿಸಲ್ಲಿಸಲು ಬೇಕಾದ ಸಾಮಾನ್ಯ ಅರ್ಹತೆಗಳು ಇವು..
– ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಅದರ ಉಪ ಸಮುದಾಯಗಳನ್ನು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರಡುಪಡಿಸಿ).
– ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000/ ಗಳು, ಪಟ್ಟಣ ಪ್ರದೇಶದವರಿಗೆ ರೂ.55,000 ಗಳ ಒಳಗಿರಬೇಕು.
– ಅರ್ಜಿದಾರರು ಅಂಗೀಕೃತ ವಿಶ್ವವಿದ್ಯಾನಿಲಯದಲ್ಲಿ ಪದವಿಧರರಾಗಿದ್ದು, ನಿರುದ್ಯೋಗಿಗಳಾಗಿರಬೇಕು.
– ಅರ್ಜಿದಾರರು ಆಧಾರ್ ಸಂಖ್ಯೆ ಹೊಂದಿರಬೇಕು.
– ಅರ್ಜಿದಾರರು IFSC ಕೋಡ್ ಹೊಂದಿರುವ ರಾಷ್ಟ್ರೀಕೃತ/ ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು.
– ಅರ್ಜಿದಾರರ ವಯಸ್ಸು ಕನಿಷ್ಠ 25 ರಿಂದ ಗರಿಷ್ಠ 40 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/10/2018
-ಈ ಮೇಲಿನ ದಿನಾಂಕದ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕು ಸ್ವೀಕರಿಸಲಾಗುವುದಿಲ್ಲ.
ಅರ್ಜಿದಾರರು ಸ್ವಯಂ ಉದ್ಯೋಗ ಸಾಲ ಪಡೆಯಲು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಯಾವುವು? ಎಂದು ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ.
Backward Classes Department announced Loan facility to unemployed degree holders up to Rs.10 lakhs at annual 6% interest. To know full details read this article.