2018-19 ನೇ ಸಾಲಿನಲ್ಲಿ ಪೂರ್ಣಾವಧಿ ಪಿಎಚ್ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10000 ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ಸಾಲಿನಲ್ಲಿ ಮುಂದುವರಿಯು೮ತ್ತಿರುವ ಅರ್ಹ ಅಭ್ಯರ್ಥಿಗಳು ನವೀಕರಣ ಹಾಗೂ 2018-19ನೇ ಸಾಳಿನಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸಿಸುತ್ತಿರುವ ಹೊಸ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಹತೆ ಮತ್ತು ಸೂಚನೆಗಳು
-ವಿದ್ಯಾರ್ಥಿಯು ಕರ್ನಾಟಕದ ರಾಜ್ಯದ ನಿವಾಸಿಯಾಗಿರಬೇಕು.
– ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 3A, 3B ಅಥವಾ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿರಬೇಕು.
– ವಿದ್ಯಾರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಈ ಕೆಳಗಿನಂತಿರಬೇಕು.
ಪ್ರವರ್ಗ- 1 ಅಭ್ಯರ್ಥಿಗಳಿಗೆ – 4.50 ಲಕ್ಷ ರೂಪಾಯಿಗಳಿರಬೇಕು
2A, 3A, 3B ಮತ್ತು ಇತರೆ ಓಬಿಸಿ ಅಭ್ಯರ್ಥಿಗಳು – 3.50 ಲಕ್ಷ ರೂಪಾಯಿಗಳು
– ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಢ ಶೇ.55 ಅಂಕಗಳನ್ನು ಪಡೆದಿರಬೇಕು
– ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2018
ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್: http://backwardclasses.kar.nic.in
ಪ್ರಕಟಣೆಯನ್ನು ಓದಲು ಕ್ಲಿಕ್ ಮಾಡಿ
November 30 last date to apply for Backward Classes Welfare department full time Ph.D fellowship. Read more here..