ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ವಿಜ್ಞಾನಿ ಆಗಬೇಕೆಂಬುವರಿಗೆ ಈಗ ಸದಾವಕಾಶ ಒದಗಿಬಂದಿದೆ. ರಕ್ಷಣಾ ಇಲಾಖೆಗೆ ಸೇರಿದ ಈ ಸಂಸ್ಥೆ ಈಗ ವಿಜ್ಞಾನಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನೇಮಕಾತಿ ವಿವರ
ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಕಂಪ್ಯೂಟರ್ ಸೈನ್ಸ್ಕಂಪ್ಯೂಟರ್ ಹಾರ್ಡ್ ವೇರ್, ಪ್ರೊಡಕ್ಷನ್, ಪ್ರೊಡಕ್ಷನ್ ಅಂಡ್ ಇಂಡಸ್ಟ್ರಿಯಲ್ , ಏರೋನಾಟಿಕಲ್, ಏರೋಸ್ಪೇಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್ ಅಂಡ್ ಆಟೋಮೇಷನ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಈ ನೇಮಕ ನಡೆಯಲಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 40
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 22-06-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 60-07-2019
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಆಯಾ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಮೊದಲ ದರ್ಜೆಯಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ಸ್ನಾತಕೋತ್ತರ ಪದವಿ, ಪಿಎಚ್ಡಿ ಮಾಡಿದವರು ಸಹ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ/ಮಹಿಳೆ/ ವಿಕಲಚೇತನರು : ಶುಲ್ಕ ವಿನಾಯಿತಿ ನೀಡಲಾಗಿದೆ
ಸಾಮಾನ್ಯ ವರ್ಗ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ : ರೂ.100
ಆನ್ಲೈನ್ ಮೂಲ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಸೈಟಿಸ್ಟ್-ಸಿ ಹುದ್ದೆಗೆ : 35 ವರ್ಷ
ಸೈಟಿಸ್ಟ್-ಡಿ ಹುದ್ದೆಗೆ : 45 ವರ್ಷ
ಸೈಟಿಸ್ಟ್-ಇ ಹುದ್ದೆಗೆ : 45 ವರ್ಷ
ಸೈಟಿಸ್ಟ್-ಎಫ್ ಹುದ್ದೆಗೆ : 55 ವರ್ಷ
ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ನೇಮಕಾತಿ ಕುರಿತು ಇತರೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ನೋಡಲು – ಕ್ಲಿಕ್ ಮಾಡಿ