ಕರ್ನಾಟಕ ಸರ್ಕಾರ, ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ ಇತ್ಯಾದಿಗಳ ಕುರಿತು ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಸಿನಿಮಾ ಕ್ಷೇತ್ರಕ್ಕೆ ಸಂಬಂಧಿಸಿದ ಈ ಕೌಶಲಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ ಯಾವುದೇ ಪದವಿಧರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಮತ್ತು ಹೆಚ್ಚಿನ ಮಾಹಿತಿಗೆ www.kcainfo.in ಹಾಗೂ https://karnatakainformation.gov.in ಗೆ ಭೇಟಿ ನೀಡಿ ಪಡೆಯಬಹುದು. ಅಭ್ಯರ್ಥಿಗಳನ್ನು ಅವರು ಪದವಿಯಲ್ಲಿ ಪಡೆದಿರುವ ಸರಾಸರಿ ಅಂಕದ ಜೇಷ್ಠತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 30-03-2019 ರಂದು ಸಂಜೆ:5 ಗಂಟೆ ಒಳಗೆ ಅರ್ಜಿಯಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ರಿಜಿಸ್ಟಾರ್ ಕರ್ನಾಟಕ ಚಲನಚಿತ್ರ ಅಕಾಡೆಮಿ, ಅಮೃತ ಮಹೋತ್ಸವ ಭವನ, ನಂ.20/ಎ, ನಂದಿನಿ ಲೇಔಟ್, ಪ್ರೆಸಿಡೆನ್ಸಿ ಶಾಲೆ ಹತ್ತಿರ ಬೆಂಗಳೂರು ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ವಯೋಮಿತಿ ಅರ್ಹತೆ
ಅರ್ಜಿ ಸಲ್ಲಿಸಲು ಅವಕಾಶ ಇರುವ ಕೊನೆಯ ದಿನಾಂಕದೊಳಗೆ 30 ವರ್ಷ ಒಳಗಿರುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 080-22028096