Home » 203 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

203 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

by manager manager

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಸನ ಮತ್ತು ಯಾದವಗಿರಿ ಜಿಲ್ಲೆಯ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 203 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು, ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಅಡಿಯಲ್ಲಿ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಗೌರವ ಸೇವೆಯ ಈ ಹುದ್ದೆಗಳಿಗ ಆನ್‌ಲೈನ್‌ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜಿಲ್ಲೆಗಳಿಗನುಗುಣವಾಗಿ ಆರಂಭಿಕ ದಿನಾಂಕ ಮತ್ತು ಕೊನೆಯ ದಿನಾಂಕ ಈ ಕೆಳಗಿನಂತಿದೆ.

ಯಾದವಗಿರಿ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31/07/2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/08/2019

ಹಾಸನ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30/07/2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/08/2019

ವಿದ್ಯಾರ್ಹತೆ

– ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರಬೇಕು

– ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 4ನೇ ತರಗತಿ ತೇರ್ಗಡೆ ಹೊಂದಿರಬೇಕು.

ಅರ್ಜಿ ಶುಲ್ಕ: ಶುಲ್ಕ ವಿನಾಯಿತಿ ಇದ್ದು, ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಎರಡ ಹುದ್ದೆಗಳಿಗೂ ಕನಿಷ್ಠ 18 ವರ್ಷ ಆಗಿರುವವರು, ಗರಿಷ್ಠ 35 ಒಳಪಟ್ಟವರು ಅರ್ಜಿ ಸಲ್ಲಿಸಬಹುದು.

ಈ ಮೇಲಿನ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ

ಯಾದವಗಿರಿ ಜಿಲ್ಲೆಯ ನೇಮಕಾತಿ ಪ್ರಕಟಣೆ ಅಧಿಸೂಚನೆ ಪಿಡಿಎಫ್‌ಗಾಗಿ – ಕ್ಲಿಕ್ ಮಾಡಿ

ಹಾಸನ ಜಿಲ್ಲೆಯ ನೇಮಕಾತಿ ಪ್ರಕಟಣೆ ಅಧಿಸೂಚನೆ ಪಿಡಿಎಫ್‌ಗಾಗಿ – ಕ್ಲಿಕ್ ಮಾಡಿ

ಈ ಮೇಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇತರ ಜಿಲ್ಲೆಗಳ ಅಧಿಸೂಚನೆ ನೋಡಲು – ಕ್ಲಿಕ್ ಮಾಡಿ

You may also like