ಕರ್ನಾಟಕ ಸರ್ಕಾರ ಹಾವೇರಿ ಜಿಲ್ಲೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (haveri va recruitment 2019) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಮಾಹಿತಿ ಓದಿರಿ.
ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗರು (Haveri Village Accountant recruitment in Revenue Department)
ಒಟ್ಟು ಹುದ್ದೆಗಳ ಸಂಖ್ಯೆ : 20
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-01-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-02-2019
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ.200
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.100
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಹಾವೇರಿ ಜಿಲ್ಲಾ ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗುವ ಚಲನ್ ಪ್ರಿಂಟ್ ತೆಗೆದುಕೊಂಡು ಖಾತೆ ನಂಬರ್ 37280027722 ಗೆ ಎಸ್ಬಿಐ ಬ್ಯಾಂಕ್ನಲ್ಲಿ ಶುಲ್ಕ ಪಾವತಿಸಬೇಕು.
ಶೈಕ್ಷಣಿಕ ವಿದ್ಯಾರ್ಹತೆ:
ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಇ, ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ :
ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ
ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ಹಾವೇರಿ ಜಿಲ್ಲೆ ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಆಯ್ಕೆ ವಿಧಾನ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೇಕಡವಾರು ಅಂಕಗಳ ಮೇಲೆ 1:5 ರ ಅನುಪಾತದಲ್ಲಿ ತಾತ್ಕಾಲಿಕ ಪಟ್ಟಿ ಪ್ರಕಟಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಇತರೆ ಹೆಚ್ಚಿನ ಮಾಹಿತಿಗೆ – ಕ್ಲಿಕ್ ಮಾಡಿ ( http //haveri-va.kar.nic.in )
ಹಾವೇರಿ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಆನ್ಲೈನ್ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ