ಭಾರತದ ಧ್ವಜ ವಿಶ್ವದಲ್ಲೇ ವಿಶಿಷ್ಟವಾಗಿ ರೂಪುಗೊಂಡಿರುವ ಬಾವುಟ. ನಮ್ಮ ಈ ಧ್ವಜವು ಒಮ್ಮಿಂದೊಮ್ಮೆಲೆ ರೂಪುಗೊಂಡಿದ್ದಲ್ಲ. ಈ ರಾಷ್ಟ್ರಧ್ವಜದ ಕಲ್ಪನೆ ಹುಟ್ಟಿದ್ದು 1906 ರಲ್ಲಿ, ಅಲ್ಲಿಂದ 1947 ರವರೆಗೆ ಹಲವಾರು ಮಾರ್ಪಾಡುಗಳನ್ನು ಹೊಂದುತ್ತ, ದೇಶ ಸ್ವಾತಂತ್ರ್ಯಗೊಳ್ಳುವ ಸಮಯಕ್ಕೆ ಪೂರ್ಣಪ್ರಮಾಣವಾಗಿ, ಅರ್ಥಗರ್ಭಿತವಾಗಿ ರೂಪುಗೊಂಡಿತು ನಮ್ಮ ಹೆಮ್ಮೆಯ ಧ್ವಜ.
ಇತಿಹಾಸ :
• ನಮ್ಮ ಹೆಮ್ಮೆಯ ರಾಷ್ಟ್ರಧ್ವಜಕ್ಕೆ ರೂಪ ನೀಡಿದವರು ಸ್ವಾತಂತ್ರ್ಯ ಹೋರಾಟಗಾರರಾದ ಆಂಧ್ರದ ಪಿಂಗಳಿ ವೆಂಕಯ್ಯ. ಧ್ವಜ ನಿರ್ಮಾತೃ ಪಿಂಗಳಿ ವೆಂಕಯ್ಯ 1916 ರಿಂದ 1921 ರ ತನಕ ಹಲವು ರಾಷ್ಟ್ರಗಳ ಧ್ವಜದ ಅಧ್ಯಯನ ನಡೆಸಿ 30 ಧ್ವಜಗಳ ಮಾದರಿಯನ್ನು ಬುಕ್ಲೆಟ್ ರೂಪದಲ್ಲಿ ನೀಡಿದ್ದರು. ಅವುಗಳಲ್ಲಿ ಎರಡು ಬಹುಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುವ ಕೆಂಪು ಮತ್ತು ಹಸಿರು ಪಟ್ಟಿಯಿಂದ ಕೂಡಿದ ಭಾರತದ ಧ್ವಜವನ್ನು ಆರಿಸಲಾಯಿತು.
• 1921 ಮಾರ್ಚ್ 30ರಂದು ಆಂಧ್ರದ ವಿಜಯವಾಡ ದಲ್ಲಿ ಸೇರಿದ ಕಾಂಗ್ರೆಸ್ ಅಧಿವೇಶನದಲ್ಲಿ ಧ್ವಜ ಪ್ರಸ್ತುತಪಡಿಸಲಾಯಿತು. ಗಾಂಧೀಜಿಯವರು ಕೆಂಪು, ಹಸಿರು ಬಣ್ಣದ ಮಧ್ಯೆ ಬಿಳಿಯನ್ನು ಸೇರಿಸಿ ಚರಕವನ್ನು ಸೂಚಿಸಿದರು.
• 1931 ಆಗಸ್ಟ್ 6 ರಂದು ಕರಾಚಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಕೇಸರಿ, ಬಿಳಿ, ಹಸಿರು ಧ್ವಜದ ಮಧ್ಯೆ ಚರಕವಿರುವ ಧ್ವಜವನ್ನು ಅಧಿಕೃತವಾಗಿ ಅಂಗೀಕರಿಸಲಾಯಿತು.
• ಜಲಂಧರ್ ನ ಶಿಕ್ಷಣ ತಜ್ಞ ಲಾಲಾ ಹಂಸರಾಜ್ ಚರಕದ ಬದಲಾಗಿ ಅಶೋಕ ಚಕ್ರವನ್ನು ಪರಿಗಣಿಸಲು ಒತ್ತಾಯಿಸಿದರು.
• ಸರ್ವಪಳ್ಳಿ ರಾಧಾಕೃಷ್ಣನ್ ತ್ರಿವರ್ಣಕ್ಕೆ ಹೊಸ ಅರ್ಥ ಕಲ್ಪಿಸಿದರು. ಕೇಸರಿ ತ್ಯಾಗ ಮತ್ತು ಬಲಿದಾನ, ಬಿಳಿ ಸತ್ಯ, ಶಾಂತಿ ಮತ್ತು ಶುಭ್ರತೆ, ಹಸಿರು ಸಮೃದ್ಧಿ, ಅಶೋಕ ನ್ಯಾಯ ಧರ್ಮದ ಸಂಕೇತವೆಂದು ಹೊಸ ಭಾಷ್ಯ ಬರೆದರು.
• ಭಾರತದ ರಾಷ್ಟ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು.
• ಪಂಡಿತ್ ಜವಾಹರ್ ಲಾಲ್ ನೆಹರೂ ರವರ ಮುಂದಾಳತ್ವದಲ್ಲಿ 1947 ರ ಜುಲೈ 22 ರಂದು ಅಸೆಂಬ್ಲಿಯಲ್ಲಿ ರಾಷ್ಟ್ರಧ್ವಜಕ್ಕೆ ಅಂತಿಮ ಸ್ಪರ್ಶ ನೀಡಿ ಅಧಿಕೃತ ಘೋಷಣೆ ಮಾಡಲಾಯಿತು.
• 1950 ಜನವರಿ 26ರ ತನಕ ಸ್ವತಂತ್ರ ಭಾರತದ ಸ್ವರಾಜ್ಯಭಾರದ ಬಾವುಟವಾಗಿ ನಂತರದ ದಿನಗಳಲ್ಲಿ ಗಣರಾಜ್ಯ ಭಾರತದ ಬಾವುಟವಾಗಿದೆ.
• ಆಗಸ್ಟ್ 31 ರಂದು ಮೊದಲ ಬಾರಿ ಧ್ವಜಾರೋಹಣ ಮಾಡಿದ ಫಲವಾಗಿ ಆ ದಿನವನ್ನು ಧ್ವಜ ದಿನವನ್ನಾಗಿ ಆಚರಿಸಲಾಗುತ್ತದೆ.
ತ್ರಿವರ್ಣ ಧ್ವಜದ ವಿಶೇಷತೆಗಳು :
ನಮ್ಮ ರಾಷ್ಟ್ರಧ್ವಜವು ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕøತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರಧ್ವಜ.
- ಕೇಸರಿಬಣ್ಣ :- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
- ಬಿಳಿಬಣ್ಣ :- ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
- ಹಸಿರು ಬಣ್ಣ :- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ.
- ಧ್ವಜದ ತಯಾರಿ ರಾಷ್ಟ್ರಧ್ವಜವನ್ನು ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು.
- ಅದು ಉಣ್ಣೆಯ ಅಥವಾ ರೇμÉ್ಮಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ. ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು.
- ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.
- ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡಡ್ರ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕøತವಾಗುತ್ತದೆ.
- ಗೌರವ ಸೂಚನೆ ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ ಜನಗಣ ಮನವನ್ನು ಹಾಡಲೇಬೇಕು.
- ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
- ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
- ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
- ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದ್ದು.
- ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು.
- ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.
- ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
- ತಾಯಿ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.
- ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
- ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
- ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
ಆರ್ಟಿಕಲ್ 370 ಬಗ್ಗೆ ನಿಮಗೆ ತಿಳಿದಿದೆಯೇ ?