ಪೊಲೀಸ್ ಇಲಾಖೆಯಲ್ಲಿ ಮೀಸಲು ಪೊಲೀಸ್, ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಆಗಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು : ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ)
ಹುದ್ದೆಗಳ ಸಂಖ್ಯೆ : 387
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-08-2021
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-09-2021
ಆನ್ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 08-09-2021
ನೇಮಕಾತಿ ಹಂತಗಳು : ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ.
ವಯೋಮಿತಿ ಅರ್ಹತೆಗಳು
ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ : PUC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸದರಿ ಹುದ್ದೆಗಳ ನೇಮಕ ಪ್ರಕ್ರಿಯೆ ವೆಬ್ ವಿಳಾಸ : http://cpcins21.ksponline.co.in/
ಅರ್ಜಿ ಸಲ್ಲಿಸುವ ಮುನ್ನ ರಿಜಿಸ್ಟ್ರೇಷನ್ಗೆ ವೆಬ್ ಲಿಂಕ್ : http://app.cpcins21.ksponline.co.in/Login.aspx