ಕರ್ನಾಟಕದ ಹೈಕೋರ್ಟ್ನಲ್ಲಿ (ಉಚ್ಚನ್ಯಾಯಾಲಯ) ಖಾಲಿ ಇರುವ 18 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ನ್ಯಾಯಾಲಯದ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-04-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-05-2019
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-05-2019
ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ಬೆರಳಚ್ಚು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಹುದ್ದೆ ಹೆಸರು : ಬೆರಳಚ್ಚುಗಾರರು
ಹುದ್ದೆಗಳ ಸಂಖ್ಯೆ: 18
ಶೈಕ್ಷಣಿಕ ಅರ್ಹತೆ
– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
– ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕನಿಷ್ಠ ಶೇ.55 ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳನ್ನು ಪದವಿಯಲ್ಲಿ ಪಡೆದಿರಬೇಕು.
– ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
– ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 250
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.250
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.100
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್ಲೈನ್ ಮೂಲಕ ಅಥವಾ ಚಲನ್ ಪ್ರಿಂಟ್ ತೆಗೆದು ಎರಡು ಮಾರ್ಗದಲ್ಲಿಯೂ ಅರ್ಜಿ ಶುಲ್ಕ ಪಾವತಿಸಬಹುದು.
ವಯೋಮಿತಿ
ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/: 40 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ
ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ
ವೇತನ ಶ್ರೇಣಿ: ಈ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ರೂ.25000 ದಿಂದ ರೂ.81100 ವರೆಗೂ ಮತ್ತು ಇತರೆ ಭತ್ಯೆಗಳು.
ಬೆರಳಚ್ಚು ಹುದ್ದೆಯ ಅಧಿಸೂಚನೆ ಪಿಡಿಎಫ್ಗಾಗಿ – ಕ್ಲಿಕ್ ಮಾಡಿ
ಬೆರಳಚ್ಚು ಹುದ್ದೆಗೆ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ