Home » ರಾಜ್ಯದ ಅಬಕಾರಿ ಉಪನಿರೀಕ್ಷಕರ ನೇಮಕ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಜ್ಯದ ಅಬಕಾರಿ ಉಪನಿರೀಕ್ಷಕರ ನೇಮಕ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

by manager manager

Recruitment for the post of Sub Inspector of Excise in Excise department

ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿನ 59 ಅಬಕಾರಿ ಉಪನಿರೀಕ್ಷಕರ (ರಾಜ್ಯ ಮಟ್ಟದ ಉಳಿಕೆ ಮೂಲ ವೃಂದ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ತಿಳಿಸಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 59

ಹುದ್ದೆಯ ಹೆಸರು : ಅಬಕಾರಿ ಉಪನಿರೀಕ್ಷಕ

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 23-11-2018

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-12-2018

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 24-12-2018

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 17-02-2018 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 600

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.300

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಶುಲ್ಕ ವಿನಾಯಿತಿ ನೀಡಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವಾದ 22/12/2018 ರಂದು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡದ ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 21 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : : 26 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 31 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : : 29 ವರ್ಷ

ಮಾಜಿ ಸೈನಿಕ ಅಭ್ಯರ್ಥಿಗಳು : ಗರಿಷ್ಠ ವಯೋಮಿತಿಯಲ್ಲಿಅವರುಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ವರ್ಷಗಳು ಜೊತೆಗೆ 03 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಭರ್ತಿ ಮಾಡಿಬೇಕು. ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ

– ಭಾವಚಿತ್ರ ಮತ್ತು ಸಹಿ

– ವಯೋಮಿತಿಗೆ ಆಧಾರವಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

– ವಿದ್ಯಾರ್ಹತೆ ದಾಖಲೆ

– ಮೀಸಲಾತಿಗೆ ಕೋರಿದ್ದರೆ ಸಂಬಂಧಿಸಿದ ದಾಖಲೆಗಳು

ಈ ಹುದ್ದೆಗೆ ದೈಹಿಕ ಸಾಮರ್ಥ್ಯ, ಮೀಸಲಾತಿ, ಮತ್ತು ಇತರೆ ಅರ್ಹತೆಗಳನ್ನು ತಿಳಿಯಲು ಮತ್ತು ಪ್ರಕಟಣೆ ನೋಡಲು ಕ್ಲಿಕ್ ಮಾಡಿ

SUBINSPECTOR OF EXCISE IN EXCISE DEPT

KPSC released the notification for the recruiment the post of Sub Inspector of Excise in Excise Dept. Read more here..

You may also like