ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಲಹೆಗಾರ (ಕನ್ಸಲ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಈ ಉದ್ಯೋಗದ ಬಗ್ಗೆ ಇತರೆ ಮಾಹಿತಿ ಈ ಕೆಳಗಿನಂತಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 24/05/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/06/2019
ಆಯ್ಕೆ ಪ್ರಕ್ರಿಯೆ : ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಆಯಾ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ. ಜೊತೆಗೆ ಆಯಾ ಹುದ್ದೆಗಳಿಗೆ ಆಯಾ ಕ್ಷೇತ್ರದ ಅನುಭವವನ್ನು ಹೊಂದಿರಬೇಕು. ಈ ಬಗ್ಗೆ ಹೆಚ್ಚಿನ ಇತರೆ ಮಾಹಿತಿ ಅಧಿಸೂಚನೆಯ ಪಿಡಿಎಫ್ನಲ್ಲಿ ಲಭ್ಯ.
ವಯೋಮಿತಿ
ಅರ್ಜಿ ಸಲ್ಲಿಸಲು ಗರಿಷ್ಠ 55 ವರ್ಷ ಮತ್ತು ನಿವೃತ್ತಿ ಹೊಂದಿದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ ಶ್ರೇಣಿ : ರೂ.50000 ಪ್ರತಿ ತಿಂಗಳು
ಅರ್ಜಿ ಸಲ್ಲಿಸುವುದು ಹೇಗೆ?
ಅಧಿಸೂಚನೆ ಪಿಡಿಎಫ್ನಲ್ಲಿ ನೀಡಲಾಗಿರುವ ಅರ್ಜಿಯನ್ನು ಪ್ರಿಂಟ್ ತೆಗೆದುಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
:- Committe Room, RDPR 3rd floor, gate no 03, MS building, Bengaluru.
– ಈ ವಿಳಾಸಕ್ಕೆ 16-06-2019 ರಂದು ಸಮಯ ಬೆಳಿಗ್ಗೆ 11 ಗಂಟೆ ವೇಳೆಗೆ ವಿಳಾಸ ಮಾಹಿತಿ ಮತ್ತು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು.
ಅರ್ಜಿ ಮತ್ತು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು – ಕ್ಲಿಕ್ ಮಾಡಿ