2019-20 ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 02-05-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-05-2019
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ www.schooleducation.kar.nic.in
ಎರಡು ವರ್ಷಗಳ ಬಿ.ಇಡಿ ಕೋರ್ಸ್ ವ್ಯಾಸಂಗ ಮಾಡಲು ಆಸಕ್ತಿವುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ, ಅರ್ಹತೆ, ಮೀಸಲಾತಿ, ಶುಲ್ಕ ವಿವರ, ಜಿಲ್ಲಾವಾರು, ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿ ಹಾಗೂ ಇತರೆ ಸೂಚನೆಗಳನ್ನು ಅಧಿಕೃತ ವೆಬ್ಸಯಟ್ನಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಸೂಚನೆಗಳನ್ನು ಓದಿಕೊಂಡು ಅರ್ಜಿಸಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಗಳ ಸಿ.ಟಿ.ಇ/ಡಯಟ್ ಪ್ರಾಂಶುಪಾಲರುಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.