Home » ಶಿವಮೊಗ್ಗ ಅಂಗನವಾಡಿ ಕೇಂದ್ರಗಳಲ್ಲಿ ನೇಮಕ: ಅರ್ಜಿ ಆಹ್ವಾನ

ಶಿವಮೊಗ್ಗ ಅಂಗನವಾಡಿ ಕೇಂದ್ರಗಳಲ್ಲಿ ನೇಮಕ: ಅರ್ಜಿ ಆಹ್ವಾನ

by manager manager

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ಓದಿ ತಿಳಿಯಿರಿ.

ಅಂಗನವಾಡಿ ಕಾರ್ಯಕರ್ತೆ- 46
ಅಂಗನವಾಡಿ ಸಹಾಯಕಿ- 101
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13-07-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12-08-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : https://anganwadirecruit.kar.nic.in/

ವಿದ್ಯಾರ್ಹತೆ : ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ, ಸಹಾಯಕಿ ಹುದ್ದೆಗೆ 4 ನೇ ತರಗತಿ ಪಾಸ್‌.

ವಯೋಮಿತಿ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವುದು ಹೇಗೆ?

  • anganwadirecruit.kar.nic.in ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ.
  • ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ
  • ‘ಸಲ್ಲಿಸಿ’ ಎಂಬಲ್ಲಿ ಕ್ಲಿಕ್ ಮಾಡಿ
  • ತೆರೆದ ಆದ ಹೊಸ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಟೈಪಿಸಿ ಅರ್ಜಿ ಸಲ್ಲಿಸಬಹುದು. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕು.

ನೋಟಿಫಿಕೇಶನ್‌

You may also like