ಸರ್ ಎಂ.ವಿಶ್ವೇಶ್ವರಯ್ಯನವರು ನಮ್ಮ ದೇಶ ಕಂಡ ಮಹಾನ್ ವ್ಯಕ್ತಿ ಮತ್ತು ಅವರ ಕೊಡಿಗೆಗಳನ್ನು ನಾವು ನೋಡುತ್ತ ಬಂದರೆ ನಮಗೆ ಆಶ್ಚರ್ಯವಾಗುತ್ತದೆ. ಕಾರಣ ಅವರ ಕೊಡುಗೆಗಳು ನಮ್ಮ ದೇಶದ ಸಂಪತ್ತಾಗಿದೆ. ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಇವರು 1912 ರಿಂದ 1918ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.
ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ 15, 1860 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ. ವಿಶ್ವೇಶ್ವರಯ್ಯನವರ ತಂದೆ ‘ಶ್ರೀನಿವಾಸ ಶಾಸ್ತ್ರಿ’, ತಾಯಿ ‘ವೆಂಕಟಲಕ್ಷ್ಮಮ್ಮ’. ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ ‘ಮೋಕ್ಷಗುಂಡಂ’ ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯನವರ ತಂದೆ ಸಂಸ್ಕøತ ವಿದ್ವಾಂಸರು, ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. 1881 ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್ :-
1908ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ರವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. 1917 ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.
ಸರ್ ಎಂ ವಿಶ್ವೇಶ್ವರಯ್ಯನವರ ನುಡಿಮುತ್ತುಗಳು ಈ ಕೆಳಗಿನಂತಿವೆ :-
– ಅಕ್ರಮ ಸಂಪಾದನೆಯಿಂದ ಮಾಡುವ ಭೂರಿ ಭೋಜನಕ್ಕಿಂತ ಕಷ್ಟಪಟ್ಟು ಕುಡಿಯುವ ಗಂಜಿನೀರು ತುಂಬಾ ಸಂತೃಪ್ತಿ ನೀಡುತ್ತದೆ – ಮೋಕ್ಷಗುಂಡಂ ವಿಶ್ವೇಶ್ವರಯ್ಯ.
– ಸಾಧನೆ ಇಲ್ಲದೆ ಯಶಸ್ಸನ್ನು ಬಯಸುವುದು ಮರುಭೂಮಿಯಲ್ಲಿ ಕುಡಿಯುವ ನೀರಿಗಾಗಿ ಹುಡುಕುವಂತಹದ್ದು – ಮೋಕ್ಷಗುಂಡಂ ವಿಶ್ವೇಶ್ವರಯ್ಯ
– ಹಣದಿಂದ ಕೊಳ್ಳುವ ಅಥವಾ ಅಳೆಯುವಂತದ್ದು ಹೊರತುಪಡಿಸಿ ಬೇರೆ ಏನನ್ನಾದರೂ ನೀವು ಸೇರಿಸಿದರೆ ಮಾತ್ರ ನಿಜವಾದ ಸೇವೆ ನೀಡಬಹುದು – ಮೋಕ್ಷಗುಂಡಂ ವಿಶ್ವೇಶ್ವರಯ್ಯ
– ಹಣವಿದ್ದರೆ ಸಾಲದು, ಒಳ್ಳೆಯ ವ್ಯಕ್ತಿತ್ವ ಇದ್ದರಷ್ಟೇ ಸಮಾಜ ಗೌರವಿಸುತ್ತದೆ – ಮೋಕ್ಷಗುಂಡಂ ವಿಶ್ವೇಶ್ವರಯ್ಯ
– ಒಂದು ದೇಶದಲ್ಲಿ ಖನಿಜ ಸಂಪನ್ಮೂಲ ಸಾಕಷ್ಟಿರಬಹುದು, ಅರಣ್ಯಗಳು, ನೌಕಾನೆಲೆಗಳು ಇರಬಹುದು, ವಿದ್ಯುತ್ ಉತ್ಪಾದನೆಗೆ ಸಾಧ್ಯವಾಗುವ ನದಿಗಳು ಇರಬಹುದು, ಆದರೆ ಮನುಷ್ಯನು ತನ್ನ ಮೇಧಸ್ಸನ್ನು ಉಪಯೋಗಿಸಿ, ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ದೇಶ ಆಗಷ್ಟೇ ಇನ್ನಷ್ಟು ಸಂಪದ್ಭರಿತವಾಗುತ್ತದೆ – ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ
– ಕೋಪಿಸಿಕೊಳ್ಳುವುದು ಎಂದರೆ ಇತರರ ತಪ್ಪುಗಳಿಗೆ ನಮ್ಮ ಮೇಲೆ ನಾವೇ ಪ್ರತೀಕಾರ ತೀರಿಸಿಕೊಳ್ಳುವುದು- ಮೋಕ್ಷಗುಂಡಂ ವಿಶ್ವೇಶ್ವರಯ್ಯ
– ಪದವಿ ಪ್ರಜಾಸೇವೆಗೆ ಹೊರತು ಸ್ವಂತ ಲಾಭಕ್ಕಾಗಿ ಅಲ್ಲ- ಮೋಕ್ಷಗುಂಡಂ ವಿಶ್ವೇಶ್ವರಯ್ಯ.
– ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಮೌಲ್ಯಯುತವಾಗಿ ಶ್ರಮಿಸಿದರೆ ಅಂದುಕೊಂಡಿದ್ದನ್ನು ಸಾಧಿಸಬಹುದು – ಮೋಕ್ಷಗುಂಡಂ ವಿಶ್ವೇಶ್ವರಯ್ಯ
– ಸಾಧಿಸಬೇಕೆಂದ ಛಲ ನಮ್ಮಲ್ಲಿನ ಬಲಹೀನತೆಗಳನ್ನು ಮೆಟ್ಟಿನಿಲ್ಲುವಂತೆ ಮಾಡುತ್ತದೆ – ಮೋಕ್ಷಗುಂಡಂ ವಿಶ್ವೇಶ್ವರಯ್ಯ
– ಒಂದು ಕೆಲಸದಲ್ಲಿ ಯಶಸ್ಸು ಸಾಧಿಸಬೇಕಾದರೆ ಮೊದಲು ಅದನ್ನು ಪ್ರೀತಿಸಬೇಕು – ಮೋಕ್ಷಗುಂಡಂ ವಿಶ್ವೇಶ್ವರಯ್ಯ.
ಯುವಜನತೆಯಲ್ಲಿ ಸ್ವತಂತ್ರದ ಕಿಚ್ಚುಹಚ್ಚಿ ಬಡಿದೆಬ್ಬಿಸಿದ ಸುಭಾಷ್ಚಂದ್ರಬೋಸ್ ರ ಕಿವಿಮಾತುಗಳಿವು..