Home » ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

by manager manager

ಕಲಬುರಗಿ
ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ನಗರ ಪ್ರದೇಶಗಳಲ್ಲಿ ‘ಇ-ವಾಣಿಜ್ಯ ಸಂಸ್ಥೆಗಳಾದ ಜೊಮ್ಯಾಟೋ, ಸ್ವಿಗ್ಗಿ, ಊಬರ್ ಹಾಗೂ ಅಮೆಜಾನ್ ಮತ್ತಿತರ (Zomato, Swiggy, Uber ets, Amazon) ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಯುವಕರಿಗೆ ದ್ವಿಚಕ್ರ ವಾಹನ (ಬೈಕ್) ಕೊಂಡುಕೊಳ್ಳಲು ನಿಗಮದಿಂದ 25,000 ರೂ.ಗಳ ಸಹಾಯ ಧನ ನೀಡಲಾಗುತ್ತಿದೆ.

ಈ ಸೌಲಭ್ಯ ಪಡೆಯಲು ಪ್ರವರ್ಗ-1 ಹಾಗೂ ಪ್ರವರ್ಗ-2ಎ, 3ಎ ಹಾಗೂ 3ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ದ್ವಿಚಕ್ರ ವಾಹನ ಖರೀದಿಗೆ ನಿಗಮದಿಂದ 25,000 ರೂ.ಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕು. ಅರ್ಹ ಯುವಕರು ಮೇಲೆ ತಿಳಿಸಲಾದ ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿರುವ ಬಗ್ಗೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಆನ್‌ಲೈನ್‌ ಅಥವಾ ಆಫ್‌ಲೈನ್‌ ಮೂಲಕ 2020 ರ ಡಿಸೆಂಬರ್ 19 ರೊಳಗಾಗಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು ನಿಗಮದ ಜಿಲ್ಲಾ ಕಚೇರಿಯಿಂದ ಉಚಿತವಾಗಿ ಅರ್ಜಿ ನಮೂನೆ ಅಥವಾ ನಿಗಮದ www.dbcdc.karnataka.gov.in ವೆಬ್‌ಸೈಟ್‌ನಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳೊಂದಿಗೆ ಅಪ್ಲಿಕೇಶನ್‌ ಸಲ್ಲಿಸಬೇಕು.

ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ಕಚೇರಿ ಮೊಬೈಲ್ ಸಂಖ್ಯೆ 08472-278635ಗೆ ಸಂಪರ್ಕಿಸಲು ಕೋರಲಾಗಿದೆ.