Home » ಉಡುಪಿ-ತುಮಕೂರು ಕೋರ್ಟ್‌ನಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಅಹ್ವಾನ

ಉಡುಪಿ-ತುಮಕೂರು ಕೋರ್ಟ್‌ನಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಅಹ್ವಾನ

by manager manager

ತುಮಕೂರು ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳ ಕೋರ್ಟ್‌ಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಜಿಲ್ಲೆಗಳ ಎರಡೂ ಕೋರ್ಟ್‌ಗಳಲ್ಲಿ ಒಟ್ಟು 28 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಎಲ್ಲೆಲ್ಲಿ ಎಷ್ಟು ಹುದ್ದೆಗಳು?

ತುಮಕೂರು: ನ್ಯಾಯಾಲಯದಲ್ಲಿ ಇರುವ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಬ್ಯಾಕ್‌ ಲಾಗ್ 12 ಮತ್ತು ಹೊಸ ಖಾಲಿ ಹುದ್ದೆಗಳು 7 ಸೇರಿ ಒಟ್ಟು 21 ಹುದ್ದೆಗಳಿಗೆ ನೇಮಕ ನಡೆಯಲಿದೆ.

ಉಡುಪಿ: ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 9 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅಂಚೆ(Post) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆಗಳು

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟರಿಯಲ್ ತರಬೇತಿ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಛಕ ವಿಷಯಗಳನ್ನಾಗಿ ಅಭ್ಯಸಿಸಿರಬೇಕು.

ವಯೋಮಿತಿ

ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಮೀಸಲಾತಿ

ಮೀಸಲಾತಿ ನಿಯಮಾನುಸಾರ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ

ತುಮಕೂರು ಕೋರ್ಟ್‌ನಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾತ್ರ ಶುಲ್ಕ ಪಾವತಿಸಬೇಕು. ಸಾಮಾನ್ಯ ಅರ್ಹತೆ, ಪ್ರವರ್ಗ-2A, 2B, 3A, 3B ಅಭ್ಯರ್ಥಿಗಳಿಗೆ 200 ರೂ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ/ಚಲನ್ ಪಡೆದು ಎಸ್‌ಬಿಐ ಬ್ಯಾಂಕ್‌ನಲ್ಲಿ ಪಾವತಿಸಬಹುದು.

ವೇತನ ಶ್ರೇಣಿ

ರೂ, 27,650-650-29,600-750-32,600,850-36,000-950-39,800-1100-46,400-1250-52,650

ನೇಮಕಾತಿ ಪ್ರಕ್ರಿಯೆ

ಶೈಕ್ಷಣಿಕ ಪರೀಕ್ಷೆಗಳಲ್ಲಿ ಗಳಿಸಿದ ಒಟ್ಟು ಶೇಕಡವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದಲ್ಲಿ ನೇಮಕಾತಿ ನಡೆಯಲಿದೆ.

Tumkuru and Udupi both district court’s are invited 28 Stenographer post. Job aspirants can apply online before June 30. Full details here..

You may also like